ಕಡಬ : ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಭೇಟೆ ನೀಡಿದರು.
ಕಳೆದ ಮೇ 13ರಂದು ದೈವಸ್ಥಾನದ ಬ್ರಹಕಲಶೋತ್ಸವಕ್ಕೆ ಆಗಮಿಸಬೇಕಿದ್ದ ರೆಡ್ಡಿ, ಆದ್ರೆ ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೇ 6ರಂದು ಮತ್ತೆ ಜೈಲುಪಾಲಾದ ಕಾರಣ ದೈವಸ್ಥಾನದ ಬ್ರಹ್ಮಕಲಶೋತ್ಸವ ಆಗಮಿಸಿರಲಿಲ್ಲ.ಹಾಗಾಗಿ ಮೇ 13ರಂದು ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ದೈವದ ಬಳಿ ಜನಾರ್ದನ ರೆಡ್ಡಿ ಆಪ್ತರು ಜೈಲಿನಿಂದ ಬಿಡುಗಡೆಗೆ ಮೊರೆ ಇಟ್ಟಿದ್ದರು.
ಇಂದಿನಿಂದ 1 ತಿಂಗಳ ಒಳಗಡೆ ಜೈಲಿನಿಂದ ಬಿಡುಗಡೆ ಆಗುತ್ತಾರೆ ಎಂದು ದೈವ ನುಡಿ ನೀಡಿತ್ತು.ದೈವದ ಅಭಯದಂತೆ ಒಂದು ತಿಂಗಳ ಒಳಗೆ ಗಾಲಿ ಜನಾರ್ದನ ರೆಡ್ಡಿ ಅವರು ಬಿಡುಗಡೆಯಾಗಿದ್ದರು, ಹಾಗಾಗಿ ಇಂದು ಸವಣೂರಿನಲ್ಲಿರುವ ಇರುವೆರ್ ಉಳ್ಳಾಕುಲು ಮತ್ತು ಕೆಡೆಂಜೋಡಿತ್ತಾಯಿ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿದ ಜನಾರ್ದನ ರೆಡ್ಡಿ ತಂಬಿಲ ಸೇವೆ ಮಾಡಿಸಿದರು.







ಈ ಸಂಧರ್ಭದಲ್ಲಿ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಉಪಸ್ಥಿತರಿದ್ದರು.



