ಕಾರ್ಕಳ: ಕಳೆದ ದಿನಗಳಿಂದ ಸುರಿದ ಭಾರಿ ಮಳೆಯಿಂದ ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತೂರು ಚರ್ಚ್‌ನ ಆವರಣ ಗೋಡೆಯು ಕುಸಿದು ಬಿದ್ದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ತಹಶೀಲ್ದಾರರ ಮಾರ್ಗದರ್ಶನದಲ್ಲಿ ಗ್ರಾಮ ಆಡಳಿತಾಧಿಕಾರಿ ಸುಕೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ದುರಸ್ತಿ ಕೆಲಸ ಕೈಗೊಳ್ಳುವಂತೆ ಸೂಚನೆಯನ್ನು ನೀಡಿದರು.




