Breaking
19 Sep 2026, Sat

ಟಯರ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಉಳ್ಳಾಲ: ಪದವಿನಂಗಡಿ ಅಜ್ಜನಕಟ್ಟೆ ಸಮೀಪದ ಟಯ‌ರ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗಲೇ ವ್ಯಕ್ತಿಯೋರ್ವರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಜುಲೈ 16 ರಂದು ನಡೆದಿದೆ.

ಮೃತಪಟ್ಟವರನ್ನು ವಿಜೇತನಗರ ಗಂಡಿ ನಿವಾಸಿ ವೇಣುಗೋಪಾಲ (40) ಎಂದು ಗುರುತಿಸಲಾಗಿದೆ.

ಹಲವು ವರ್ಷಗಳಿಂದ ಟಯರ್ ಶಾಪ್‌ನಲ್ಲಿ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಸಂಜೆ ವೇಳೆ ಕೆಲಸ ನಿರ್ವಹಿಸುತ್ತಿದ್ದಾಗಲೇ ಕುಸಿದುಬಿದ್ದು ಮೃತಪಟ್ಟದ್ದಾರೆ ಎಂದು ತಿಳಿದು ಬಂದಿದೆ.

ಮೃತರು ತಾಯಿ, ಇಬ್ಬರು ಸಹೋದರಿಯರು ಮತ್ತು ಸಹೋದರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *