ಕಾರ್ಕಳ: ಪತ್ನಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಪತಿ, ರಕ್ತ ಹರಿಯುತ್ತಿರುವ ದೃಶ್ಯವನ್ನು ನೋಡಿ ಹೆದರಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್‌ಬೆಟ್ಟು ನಡಿಮತ್ತಾವು ಎಂಬಲ್ಲಿ ನಡೆದಿದೆ.

ಸುರೇಖಾ (44) ಎಂಬ ಮಹಿಳೆಯ ಮೇಲೆ ಅವರ ಪತಿ ಗೋಪಾಲಕೃಷ್ಣ (60) ಕತ್ತಿಯಿಂದ ಹಲ್ಲೆ ನಡೆಸಿದ್ದು, ನಂತರ ಅವರು ತಮ್ಮ ಮನೆಯ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




