ಮಂಗಳೂರು: ನಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಎಂಟು ಮಂದಿ ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಜುಲೈ 16ರಂದು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಕೇರಳದ ರಾಹುಲ್, ಸಂಗೀತ್ ಕೃಷ್ಣ ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್, ರಿಚರ್ಡ್, ಅನುರಾಗ್ ಎಂದು ಗುರುತಿಸಲಾಗಿದೆ.

ನಗರದ ಬಂದರ್ ದಕ್ಕೆಯಲ್ಲಿ ಆರೋಪಿಗಳು ಡ್ರಗ್ಸ್ ಮಾರಾಟ ಮಾಡುತ್ತಿರುವಾಗ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.
ನಗರದ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಠಾಣೆಯ ಇನ್‌ಸ್ಪೆಪೆಕ್ಟರ್ ಗುರುರಾಜ್,ಸಿಬ್ಬಂದಿಗಳಾದ ಮಾರುತಿ, ಶೀತಲ್ ಅಲಗೂರು, ರೇಖಾ ಉತ್ತರರರು ಪಾಲ್ಗೊಂಡಿದ್ದರು.



