ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆಯು ಬೆಂಗಳೂರಿನಲ್ಲಿ ಇಂದು(ಜು. 17) ನಡೆಯಿತು. ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಭಾಗವಹಿಸಿದರು.

ಈ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಚರ್ಚೆ ನಡೆಯಿತು. ಈ ವೇಳೆ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಅಧಿಕಾರಗಳ ಗಮನಕ್ಕೆ ತಂದ ಬಂಟ್ವಾಳ ತಾಲೂಕಿನ ಶಾಸಕರು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಲ್ಲಿ ಪರಿಹರಿಸುವಂತೆ ಮನವಿಯನ್ನು ಮಾಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತರಾದ ಶಿವಕುಮಾರ್ ಕೆ. ಬಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.




