Breaking
20 Sep 2026, Sun

ಪತ್ನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

ಉಪ್ಪಿನಂಗಡಿ: ಪತಿ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಜು.17ರಂದು ನಡೆದಿದೆ.

ಬಾಜಾರು ನಿವಾಸಿ ಝೀನತ್ (41) ಮೃತ ಮಹಿಳೆ. ಪತಿ ರಫೀಕ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಇಂದು ಬೆಳಗ್ಗೆ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಪತ್ನಿಗೆ ರಫೀಕ್ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *