ಫರಂಗಿಪೇಟೆ: ಕಳೆದ ದಿನಗಳಿಂದ ಸುರಿದ ಭಾರಿ ಮಳೆಗೆ ಅಮ್ಮೆಮ್ಮಾರ್ ಪ್ರದೇಶದಲ್ಲಿ ಗುಡ್ಡ ಕುಸಿದು ಮನೆಯೊಂದಕ್ಕೆ ಹಾನಿಯಾದ ಘಟನೆ ನಡೆದಿದೆ.

ಝುಬೈರ್ ಎಂಬವರ ಮನೆಯ ಹಿಂಬದಿಯ ಗುಡ್ಡ ಕುಸಿದಿದ್ದು, ಭಾಗಶಃ ಹಾನಿಯಾಗಿದೆ. ಈ ಭಾಗದಲ್ಲಿ ಇನ್ನಷ್ಟು ಗುಡ್ಡ ಕುಸಿಯುವ ಅಪಾಯವಿರುವ ಹಿನ್ನಲೆಯಲ್ಲಿ ಕೆಲವು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ರಶೀದಾ, ಗ್ರಾಮದ ಲೆಕ್ಕಾಧಿಕಾರಿ ಅಶ್ವಿನಿ, ಗ್ರಾಪಂ ಸದಸ್ಯರಾದ ಶಾಫಿ ಅಮೆಮ್ಮಾರ್, ಸಾರಾ, ಆತಿಕಾ, ರುಕ್ಸಾನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




