ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮದ ತಲೆಂಬಿಲ ಎಂಬಲ್ಲಿ ಗುಡ್ಡ ಕುಸಿದು ಮನೆಯೊಂದಕ್ಕೆ ಭಾರೀ ಹಾನಿಯಾದ ಘಟನೆ ಜುಲೈ 17 ರಂದು ನಡೆದಿದೆ.

ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಮಾಜಿ ಸಚಿವರಾದ ಬಿ ರಮಾನಾಥ ರೈಯವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.




