Breaking
20 Sep 2026, Sun

ತೆರ್ನಮಕ್ಕಿಯಲ್ಲಿ ಜೋಕಾಲಿ ಆಟವಾಡುತ್ತಿದ್ದಾಗ ಚೂಡಿದಾರಿನ ಶಾಲ್ ಸಿಲುಕಿ ಬಾಲಕಿ ಸಾವು

ಕಾರವಾರ: ಭಟ್ಕಳ ತಾಲೂಕಿನ ತೆರ್ನಮಕ್ಕಿಯಲ್ಲಿ ಬಾಲಕಿಯೊಬ್ಬಳು ಜೋಕಾಲಿಯಲ್ಲಿ ಆಡುವ ವೇಳೆ ಚೂಡಿದಾರಿನ ಶಾಲ್ ಕುತ್ತಿಗೆಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಬಾಲಕಿಯನ್ನು ಪುಣಿತಾ ಜಗನ್ನಾಥ ನಾಯ್ಕ (12) ಎಂದು ಗುರುತಿಸಲಾಗಿದೆ.

ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಪುಣಿತಾ ಮನೆಯಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಆಕೆಯ ಚೂಡಿದಾರಿನ ಶಾಲು ಕುತ್ತಿಗೆಗೆ ಸಿಲುಕಿದ್ದು ಈ ದುರ್ಘಟನೆ ಸಂಭವಿಸಿದೆ.

ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರಮಧ್ಯೆಯಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *