ಬಂಟ್ವಾಳ : ಅಮ್ಟಾಡಿ ಗ್ರಾಮದ ಜೋಸ್ಸಿ ಮೆಲ್ವಿನ್ ವೇಗಸ್ ರವರ ಮನೆಯ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣ ಹಾನಿಗಿಡಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿಯವರು ಭೇಟಿ ನೀಡಿ ಅಗತ್ಯ ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ವಿಜಯ್ ಕುಮಾರ್, ಬಿಜೆಪಿ ಪ್ರ. ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಪ್ರಮುಖರಾದ ಬಬಿತ ಕೋಟ್ಯಾನ್,ಯೋಗೀಶ್ ಅಮ್ಟಾಡಿ,ಮೋಹಿನಿ ಅಮ್ಟಾಡಿ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.




