Breaking
13 May 2026, Wed

ಮಂಗಳೂರು : ಹೆಬ್ಬಾವು ಮಾರಾಟ ಜಾಲ ಪತ್ತೆ ಹಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು

ಮಂಗಳೂರು : ನಗರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹೆಬ್ಬಾವು ಮಾರಾಟ ಜಾಲ ಪತ್ತೆ ಹಚ್ಚಿದ್ದು, ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸಾಕು ಪ್ರಾಣಿ ಅಂಗಡಿ ಮಾಲೀಕ ಇಬ್ರಾಹಿಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬ್ಬಂದಿ ಮೊಹಮ್ಮದ್ ಮುಸ್ತಫಾ (22) ಮತ್ತು ಮಂಗಳೂರಿನ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ(16) ಎಂದು ಗುರುತಿಸಲಾಗಿದೆ.

ಸ್ಟೇಟ್‌ಬ್ಯಾಂಕ್‌ನಲ್ಲಿರುವ ಸಾಕು ಪ್ರಾಣಿ ಮಾರಾಟ ಅಂಗಡಿಯಲ್ಲೂ ಹಾವು ಮಾರಾಟ ನಡೆಯುತ್ತಿದೆ ಎನ್ನುವ ಮಾಹಿತಿಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಇದೇ ಸಂದರ್ಭ ಗ್ರಾಹಕರ ಸೋಗಿನಲ್ಲಿ ಓರ್ವ ಯುವಕನನ್ನು ಅಲ್ಲಿಗೆ ಕಳುಹಿಸಿದ್ದು, ಆಗ ಅಲ್ಲಿನ ಸಿಬ್ಬಂದಿ ತಮ್ಮಲ್ಲಿ ಹಾವಿದೆ ತರಿಸಿ ಕೊಡುತ್ತೇವೆ ಎಂದು ವಿಹಾಲ್‌ಗೆ ಕರೆ ಮಾಡಿದರು. ತತ್‌ಕ್ಷಣ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮಾಲಕ ಹಾಗೂ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಅಂಗಡಿಯಲ್ಲಿ ನಕ್ಷತ್ರ ಆಮೆಗಳೂ ಸಿಕ್ಕಿದ್ದು, ಅವುಗಳನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿಗಳ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *