Breaking
20 Sep 2026, Sun

ಉಡುಪಿಯ ಸಂತೆಕಟ್ಟೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಪೊಲೀಸ್‌ ವಶಕ್ಕೆ

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ ಮಾಡಿದ್ದ ನಾಲ್ವರನ್ನು ಕುಂದಾಪುರ ಪೊಲೀಸರು ಜುಲೈ 18ರಂದು ಉಡುಪಿಯ ಸಂತೆಕಟ್ಟೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 64 ಕೆಜಿ ತೂಕದ ಹಿತ್ತಾಳೆಯ ವಸ್ತು, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, 50 ಕೆಜಿ ತೂಕದ ತಾಮ್ರದ ಸರಿಗೆ, 34 ಕೆಜಿ ತೂಕದ ತಾಮ್ರದ ಸರಿಗೆ, ಫ್ರಿಡ್ಜ್ ಕಂಪ್ರಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಕುಂದಾಪುರ ನಗರ ಠಾಣಾ ಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ, ಸಂಚಾರ ಎಸ್‌ಐ ನೂತನ್, ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರಿನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್, ಸತೀಶ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *