Breaking
19 Sep 2026, Sat

ಮಹಿಳೆಗೆ ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ: ಮಹಿಳೆಯೊಬ್ಬರಿಗೆ ಆನ್‌ಲೈನ್ ಮೂಲಕ ಲಕ್ಷಾಂತರ ರೂ. ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿಯ ನಿವಾಸಿ ಸುಹಾಸಿನಿ ಅವರ ವಾಟ್ಸ್‌ ಆ್ಯಪ್‌ ಸಂಖ್ಯೆಗೆ ಯಾರೋ ಅಪರಿಚಿತರು ಸಂದೇಶ ಕಳುಹಿಸಿದ್ದು, ಅನಂತರದಲ್ಲಿ ಎ432 ಗೇಟ್‌ ಗ್ರೂಪ್‌ ಎಂಬ ಟೆಲಿಗ್ರಾಂ ಗ್ರೂಪ್‌ಗೆ ಸೇರುವಂತೆ ಲಿಂಕ್‌ ಕಳುಹಿಸಿದ್ದರು. ಅದನ್ನು ನಂಬಿದ ಸುಹಾಸಿನಿ ಅವರು 11,61,256 ರೂ. ಹೂಡಿಕೆ ಮಾಡಿದ್ದು, ಹೂಡಿಕೆ ಮಾಡಿದ ಹಣ ಅಥವಾ ಲಾಭಾಂಶ ನೀಡದೆ ಆರೋಪಿಗಳು ವಂಚಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *