ಆ್ಯಂಬುಲೆನ್ಸ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ : ರೋಗಿ ಸಾವು

ಉಡುಪಿ: ಆ್ಯಂಬುಲೆನ್ಸ್ ಏಕಾಏಕಿ ನಿಯಂತ್ರಣ ತಪ್ಪಿ ಡಿವೈಡರ್ ಮತ್ತು ಬ್ಯಾರಿಕೇಡ್‌ಗಳಿಗೆ ಡಿಕ್ಕಿ ಹೊಡೆದು ರೋಗಿ ಮೃತಪಟ್ಟ ಘಟನೆ ಎಂಜಿಎಂ ಕಾಲೇಜಿನ ಎದುರುಗಡೆ ಇಂದು (ಜು.19) ನಡೆದಿದೆ.

ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಆ್ಯಂಬುಲೆನ್ಸ್ ನಲ್ಲಿ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದ ಬಳಿಕ ತಕ್ಷಣ ರೋಗಿಯನ್ನು ಮತ್ತೊಂದು ಆ್ಯಂಬುಲೆನ್ಸ್‌ಗೆ ಸ್ಥಳಾಂತರಿಸಿ, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *