ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು(ಜು.19) ರಂದು ನಡೆದಿದೆ.
ಈ ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ಖಾಸಗಿ MNC ಕಂಪನಿಯ 40 ಕ್ಕೂ ಹೆಚ್ಚು ಸಿಬ್ಬಂದಿಗಳು ಕುದುರೆಮುಖ ಹಾಗೂ ನೇತ್ರಾವತಿ ಪೀಕ್ ಟ್ರಕ್ಕಿಂಗ್‌ಗೆ ತೆರಳಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಚಿಕ್ಕಮಗಳೂರು ಮತ್ತು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



