Breaking
13 May 2026, Wed

ಹನುಮಗಿರಿ ಮೇಳದ ಹಿರಿಯ ವೇಷದಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ನಿಧನ

ಸಿದ್ದಕಟ್ಟೆ: ಹನುಮಗಿರಿ ಮೇಳದ ಘನವೆತ್ತ ಬಣ್ಣದ ವೇಷದಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಅವರು ಇಂದು ಇಹಲೋಕ ತ್ಯಜಿಸಿದರು.
1965 ಡಿಸೆಂಬರ್ 17ರಂದು   ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ಧಕಟ್ಟೆಯಲ್ಲಿ ಜನಿಸಿದ ಶ್ರೀಯುತರು 6ನೇ ತರಗತಿಯ ವರೆಗೆ ಶಿಕ್ಷಣ ಪಡೆದಿದ್ದರು.

ನಂತರ ಗುರುಗಳಾದ ರೆಂಜಾಳ ರಾಮಕೃಷ್ಣ ರಾವ್, ಬಣ್ಣದ ಮಹಾಲಿಂಗ  ಅವರಿಂದ ಯಕ್ಷಗಾನ ಕಲಿತರು. ಮುಂದೆ ಇರಾ ಗೋಪಾಲಕೃಷ್ಣ ಭಾಗವತ, ಸುಣ್ಣಂಬಳ ವಿಶ್ವೇಶ್ವರ ಭಟ್, ಬೆಳ್ಳಾರೆ ಮಂಜುನಾಥ ಭಟ್ ಮತ್ತು ಹಿರಿಯ ಕಲಾವಿದರಿಂದ ರಂಗಮಾಹಿತಿ ಮತ್ತು ಹೆಚ್ಚಿನ ಕಲಿಕೆಯನ್ನು ಮಾಡಿದರು.
  2 ವರ್ಷ ಕಟೀಲು 2ನೇ ಮೇಳದಲ್ಲಿ ನೇಪಥ್ಯ ಕಲಾವಿದನಾಗಿ ತಿರುಗಾಟ, ಕಟೀಲು 1ನೇ ಮೇಳದಲ್ಲಿ 8 ವರ್ಷಗಳ ಕಾಲ ಬಣ್ಣದ ವೇಷಧಾರಿಯಾಗಿ  ತಿರುಗಾಟ, ಆಮೇಲೆ 13 ವರ್ಷಗಳ ಕಾಲ ಧರ್ಮಸ್ಥಳ ಮೇಳದಲ್ಲಿ ಬಣ್ಣದ ವೇಷಧಾರಿಯಾಗಿ ತಿರುಗಾಟ ಮಾಡಿದರು.

ನಂತರದ ಈ ಹದಿಮೂರು ವರ್ಷಗಳಲ್ಲಿ ಹೊಸನಗರ, ಎಡನೀರು ಮತ್ತು ಹನುಮಗಿರಿ ಮೇಳಗಳಲ್ಲಿ ಹಿರಿಯ ವೇಷಧರಿಯಾಗಿ ಸೇವೆ ಸಲ್ಲಿಸಿದ್ದರು.

ತಾವು ಗುರುಗಳಾಗಿ ತಮ್ಮ ಶಿಷ್ಯಂದಿರಾದ ಸತೀಶ ನೈನಾಡು, ಶಬರೀಶ ಮಾನ್ಯ, ಮನೀಷ್ ಪಾಟಾಳಿ, ಮಧುರಾಜ್ ಪಾಟಾಳಿ, ಸುಬ್ರಹ್ಮಣ್ಯ ಭಟ್ ಬದಿಯಡ್ಕ, ಸಚಿನ್ ಪಾಟಾಳಿ, ಶ್ರೀಶ ಮಣಿಲ, ರಂಜಿತ್ ಗೋಳಿಯಡ್ಕ ಮೊದಲಾದವರಿಗೆ ಸದಾಶಿವ ಶೆಟ್ಟಿಗಾರರು ವಿದ್ಯಾದಾನ ಮಾಡಿದ್ದಾರೆ.


Leave a Reply

Your email address will not be published. Required fields are marked *