ಪುರಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ಮುಂದಾಳು ಜನಾರ್ದನ ಚಂಡ್ತಿಮಾರ್ ನಿಧನ

ಬಂಟ್ವಾಳ: ಅಸೌಖ್ಯದ ಕಾರಣದಿಂದ ಬಂಟ್ವಾಳ ಪುರಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ಮುಂದಾಳು ಜನಾರ್ದನ ಚಂಡ್ತಿಮಾರ್ (55) ಅವರು ಇಂದು (ಜು.21) ರಂದು ಇಹಲೋಕ ತ್ಯಜಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದಲ್ಲದೇ, ದಲಿತ ಸಂಘಟನೆಗಳಲ್ಲಿ ಸಹ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಜನಾರ್ಧನ ಚಂಡ್ತಿಮಾರ್‌ ಅಗಲಿಕೆಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ ಸೇರಿದಂತೆ ವಿವಿಧ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *