ಮೂಲ್ಕಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಉಡುಪಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮೂಲ್ಕಿ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಉಡುಪಿ ಜಿಲ್ಲೆಯ ಬಡಗುಬೆಟ್ಟು ನಿವಾಸಿ ಬಸ್ಸು ನಿರ್ವಾಹಕ ದೀಪಕ್(19) ಮತ್ತು ಆತನ ಸ್ನೇಹಿತ ಅತ್ರಾಡಿ ಪರ್ಕಳ ಭಟ್ರಪಲ್ಕೆ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.

ಆರೋಪಿಗಳಿಗೆ ಬಾಲಕಿ ಇನ್ಸ್ಟಾ ಗ್ರಾಮ್ ಮೂಲಕ ಪರಿಚಯವಾಗಿದ್ದು, ಅದರಂತೆ ಆರೋಪಿಗಳು ಜು.19 ರಂದು ಮೂಲ್ಕಿ ಸಮೀಪದ ಬಪ್ಪನಾಡು ನಿಂದ ಸ್ಕೂಟರ್ ನಲ್ಲಿ ಬಾಲಕಿಯನ್ನು ಅಪಹರಿಸಿಕೊಂಡು ಉಡುಪಿ ಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ .




