Breaking
23 Dec 2024, Mon

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಒಟ್ಟು 445.45 ಕೋಟಿ ವ್ಯವಹಾರ, 1.68 ಕೋಟಿ ಲಾಭ- ಪ್ರಭಾಕರ ಪ್ರಭು

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ ಒಟ್ಟು 445.45 ಕೋಟಿ ವ್ಯವಹಾರ ನಡೆಸಿ , 1.68 ಕೋಟಿ ಲಾಭ ಗಳಿಸಿದೆ ಎಂದು ಬ್ಯಾಂಕ್ ನ ಅಧ್ಯಕ್ಷ ಪ್ರಭಾಕರ ಪ್ರಭು ಸಿದ್ದಕಟ್ಟೆ ಅವರು ತಿಳಿಸಿದರು.

ಅವರು‌ ಬ್ಯಾಂಕ್ ನ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಸಂಘವು 1947 ರಲ್ಲಿ ಆಗಿನ ಸಹಕಾರಿ ಬಂಧುಗಳ ನೆರವಿನಿಂದ ಬಿ. ಕೃಷ್ಣ ರೈ ರವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದ್ದು , ಸಂಘವು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮ ಸೇರಿದಂತೆ ಬಂಟ್ವಾಳ ತಾಲೂಕಿನ 7 ಗ್ರಾಮಗಳೊಂದಿಗೆ ಒಟ್ಟಾರೆ 8 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದ್ದು ,ಆಡಳಿತ ಮಂಡಳಿಯ ನಿರ್ದೇಶಕರ , ಸಿಬ್ಬಂದಿಗಳ ಹಾಗೂ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ಎಲ್ಲರಿಗೂ ತೃಪ್ತಿಕರವಾದ ಸೇವೆಯನ್ನು ನೀಡುತ್ತಾ ಬಂದಿದೆ.ಕಳೆದ 77 ವರ್ಷಗಳಿಂದ ಕಾರ್ಯಚರಿಸುತ್ತಿದ್ದು,ಅಭಿವೃದ್ದಿಯಲ್ಲಿ ಮುನ್ನಡೆಯುತ್ತಿದೆ ಎಂದು ಅವರು ತಿಳಿಸಿದರು.

2023-24 ನೇ ಸಾಲಿನ ವರ್ಷಾಂತ್ಯಕ್ಕೆ 54.39 ಕೋಟಿ ಠೇವಣಿ ಹೊಂದಿದ್ದು , ವರದಿ ವರ್ಷದಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು 55 ಕೋಟಿ ಸಾಲ ವಿತರಿಸಲಾಗಿದ್ದು ,ಹೊರ ಬಾಕಿ ಸಾಲವು 98.24 ಕೋಟಿ ಆಗಿದೆ. ವಿತರಿಸಿದ ಸಾಲದಲ್ಲಿ ಶೇ 98% ರಷ್ಟು ವಸೂಲಾತಿಯಾಗಿರುತ್ತದೆ. ಸಂಘವು ಕಳೆದ ಹಲವಾರು ವರ್ಷಗಳಿಂದ ಅಡಿಟ್ ವರದಿಯಲ್ಲಿ “ಎ” ಗ್ರೇಡ್ ನ್ನು ನಿರಂತರವಾಗಿ ಕಾಯ್ದುಕೊಂಡು ಬದಲಾಗಿದೆ ಎಂದರು.

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಗರಿಷ್ಠ ಸಾಧನೆ

2023-24 ನೇ ಸಾಲಿನಲ್ಲಿ 1771 ರೈತರು 2037 ಎಕ್ರೆ ಜಮೀನಿಗೆ ಸಂಬಂಧಿಸಿದಂತೆ 52.74 ಲಕ್ಷ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಸಂಬಂಧಿಸಿ ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ. ಕಳೆದ ವರ್ಷ ಸಂಘದ ವ್ಯಾಪ್ತಿಯ ಸದಸ್ಯರು ಸುಮಾರು 8-10 ಕೋಟಿ ಬೆಳೆವಿಮೆ ಪರಿಹಾರ ಪಡೆದಿರುತ್ತಾರೆ . ಇದರಿಂದ ಸಂಘವು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿರುವ ಬೆರಳೆಣಿಕೆಯ ಸಹಕಾರಿ ಸಂಘಗಳಲ್ಲಿ ಒಂದಾಗಿದೆ.

ಪ್ರತಿಭಾ ಪುರಸ್ಕಾರ: ಸಂಘದ ಸದಸ್ಯರ ಪ್ರತಿಭಾನ್ವಿತ SSLC ಹಾಗೂ PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.

‘ರೈತನಿಧಿ” ಯೋಜನೆ: ಸಂಘದಿಂದ ಬೆಳೆ ಸಾಲ ಪಡೆದ ಸದಸ್ಯರು ಮರಣ ಹೊಂದಿದ್ದಲ್ಲಿ, ಅವರ ಕುಟುಂಬಕ್ಕೆ ಸಂಘದ ವತಿಯಿಂದ ನೆರವಾಗುವ ದೃಷ್ಠಿಯಲ್ಲಿ ‘ರೈತನಿಧಿ” ಯೋಜನೆಯ ಮೂಲಕ ಆರ್ಥಿಕವಾಗಿ ಸಹಕಾರ ನೀಡಲಾಗುತ್ತಿದೆ.

ಪ್ರಯಾಣಿಕರ ಬಸ್ಸು ತಂಗುದಾಣ ಮತ್ತು ರಿಕ್ಷಾ ನಿಲ್ದಾಣ: ಸಂಘದ ಸದಸ್ಯರ ಬೇಡಿಕೆಗೆ ಅನುಗುಣವಾಗಿ ಸಿದ್ದಕಟ್ಟೆ ಪೇಟೆಯ ಶ್ರೀ ರಾಮನಗರದಲ್ಲಿ ಪ್ರಯಾಣಿಕರಿಗೆ ಅನೂಕೂಲವಾಗುವಂತೆ ಸುಸಜ್ಜಿತವಾದ ಪ್ರಯಾಣಿಕರ ಬಸ್ಸು ತಂಗುದಾಣ , ಹಾಗೂ ರಿಕ್ಷಾ ಚಾಲಕ –ಮಾಲಕರಿಗೆ ಸಹಕರಿಸುವ ನಿಟ್ಟಿನಲ್ಲಿ ಆಟೋ ರಿಕ್ಷಾ ನಿಲ್ದಾಣವನ್ನು ಸಂಘದ ವತಿಯಿಂದ ನಿರ್ಮಿಸಿ ಕೊಡಲಾಗಿದ್ದು ಸಂಘವು ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗಿದೆ.

ನ್ಯಾಯಬೆಲೆ ಅಂಗಡಿ: ನ್ಯಾಯಬೆಲೆ ಅಂಗಡಿಯ ಮೂಲಕ ಸಂಘದಲ್ಲಿ ಪಡಿತರ ಸಾಮಾಗ್ರಿಗಳನ್ನು ಸಮರ್ಪಕವಾಗಿ ವಿತರಿಸಲಾಗಿದ್ದು,ಸಂಘದಲ್ಲಿ “ನೇತಾಜಿ ಬಹುಪಯೋಗಿ ಸೇವಾಕೇಂದ್ರ”ದ ಹೆಸರಿನಲ್ಲಿ ಗೋದಾಮು ಕಟ್ಟಡ ಇದ್ದು,ಇದರ ಮೂಲಕ ರಾಸಾಯನಿಕ ಗೊಬ್ಬರ ,ಸಾವಯವ ಗೊಬ್ಬರ,ಮೈಲುತ್ತುತ್ತು , ಸುಣ್ಣ, ಸೇರಿದಂತೆ ರೈತರಿಗೆ ಬೇಕಾಗುವ ಉತ್ತಮ ಗುಣಮಟ್ಟದ ಕೃಷಿ ಉಪಯುಕ್ತ ಉಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಯೋಗ್ಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ .

ಶಾಖೆಗಳು: ಸಿದ್ದಕಟ್ಟೆ ಪ್ರಧಾನ ಕಛೇರಿ ಸೇರಿದಂತೆ,ಸಂಘವು ಆರಂಬೋಡಿ, ರಾಯಿ, ಮಾವಿನಕಟ್ಟೆಎಂಬಲ್ಲಿ ಒಟ್ಟುಮೂರು ಶಾಖೆಗಳನ್ನು ಹೊಂದಿದ್ದು , ಸಿ ಸಿ ಕ್ಯಾಮೆರ ಹಾಗೂ ಸೈರನ್ ವ್ಯವಸ್ಥೆ ಕಲ್ಪಿಸಲಾಗಿದ್ದು ಗ್ರಾಹಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ RTGS , NEFT ವ್ಯವಸ್ಥೆಯೊಂದಿಗೆ ಕ್ಯೂ ಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ,.

ರೈತ ಸಭಾಂಗಣ: ಸಾರ್ವಜನಿಕ ಕಾರ್ಯಕ್ರಮಕ್ಕೆ ಅನೂಕೂಲವಾಗುವಂತೆ ಸಂಘದ ಸ್ಥಾಪಕ ಅಧ್ಯಕ್ಷ ಬೆಳ್ಳಿಪ್ಪಾಡಿ ಕೃಷ್ಣ ರೈ ಅವರ ಸವಿನೆನಪಿಗಾಗಿ ಅವರ ಹೆಸರಿನಲ್ಲಿ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರ ಕಾರ್ಯಕ್ರಮಗಳಿಗೆ ಸಭಾಂಗಣವನ್ನು ಉಚಿತವಾಗಿ ನೀಡಲಾಗುತ್ತಿದೆ.

2023-24 ನೇ ಸಾಲಿನ ಮಹಾಸಬೆಯು ದಿನಾಂಕ 21 ರಂದು ಶನಿವಾರ ಬೆಳಿಗ್ಗೆ 10.30 ಕ್ಕೆ ಸಂಘದ ಕೇಂದ್ರ ಕಛೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಜರಗಲಿದೆ ಎಂದು ಅವರು ತಿಳಿಸಿದ್ದಾರೆ .

ನಿರ್ದೇಶಕರಾದ ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು , , ಉಮೇಶ್ ಗೌಡ , ದೇವರಾಜ್ ಸಾಲ್ಯಾನ್ , ಹರೀಶ್ ಆಚಾರ್ಯ , ಶ್ರೀಮತಿ ಮಂದಾರತಿ ಎಸ್ ಶೆಟ್ಟಿ, ವೃತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್ ,,ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *