Breaking
20 Sep 2026, Sun

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸ್ಲೀಪರ್‌ ಬಸ್:‌ ಓರ್ವ ಸಾವು, ಹಲವರಿಗೆ ಗಾಯ

ಅಂಕೋಲಾ: ತಾಲೂಕಿನ ಅಗಸೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್‌ ಹಳ್ಳಕ್ಕೆ ಬಿದ್ದು ಓರ್ವ ಮೃತಪಟ್ಟು 18 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು(ಜು.21) ಮುಂಜಾನೆ ನಡೆದಿದೆ.

ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಅಂಕೋಲಾ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ.

ತಕ್ಷಣವೇ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನುಆಸ್ಪತ್ರೆಗೆ ದಾಖಲಿಸಲಾಯಿತು.

ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *