Breaking
13 May 2026, Wed

ಕೆಲಿಂಜದಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಅಪಘಾತ: ಚಾಲಕ ಸಾವು

ವಿಟ್ಲ: ವೀರಕಂಭ ಗ್ರಾಮದ ಕೆಲಿಂಜದಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಚಾಲಕ ಮೃತಪಟ್ಟಿರುವ ಘಟನೆ ಜುಲೈ 21 ರ ತಡರಾತ್ರಿ ನಡೆದಿದೆ.

ಮೃತಪಟ್ಟ ಚಾಲಕನನ್ನು ಅನಂತಾಡಿ ಆಶ್ವತ್ತಡಿ ಮೂಲದ ಅನೀಶ್ (34) ಎಂದು ಗುರುತಿಸಲಾಗಿದೆ.

ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಅನೀಶ್ ಹಾಗೂ ಅವರ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡಿದ್ದು ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿಯಿತು.

ಆದರೆ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅನೀಶ್ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *