ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ

ಮಂಗಳೂರು : ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು.21 ರಾತ್ರಿ ನಡೆದಿದೆ. ಹೋಟೆಲ್ ಹಾಗೂ ಇತರೆ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದ ನಿತಿನ್, ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ನಿತಿನ್ ಸುವರ್ಣ ಅವರು ಬಿಜೆಪಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿಯ ಆಪ್ತ ವಲಯದಲ್ಲಿ ಇರುವವರೆಂದು ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಸ್ಪಷ್ಟವಾಗದಿದ್ದರೂ, ಅವರು ಆರ್ಥಿಕ ಸಂಕಷ್ಟಗಳಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಮೂಲತಃ ಮರೋಳಿಯ ನಿವಾಸಿಯಾಗಿದ್ದ ನಿತಿನ್, ಮಣ್ಣಗುಡ್ಡದ ಗುಂಡೂರಾವ್ ಲೇನ್ ಬಳಿಯ ಫ್ಲಾಟ್‌ನಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದರು. ಆತ್ಮಹತ್ಯೆ ಸ್ಥಳಕ್ಕೆ ಬರ್ಕೆ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ .

Leave a Reply

Your email address will not be published. Required fields are marked *