ತೋಟದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಮಣ್ಣ ಗುಂಡಿ ಸಮೀಪದ ಎಡಿಲ್ಲ ಎಂಬಲ್ಲಿ ವ್ಯಕ್ತಿಯೋರ್ವರು ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜು.22 ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿ ನೆಲ್ಯಾಡಿ ಸಮೀಪದ ಬರೆಗುಡ್ಡೆ ನಿವಾಸಿ ವಿಜೇಶ್ ಎ. (43)ಎಂದು ಗುರುತಿಸಲಾಗಿದೆ.

ಮಂಗಳವಾರ ಬೆಳಗ್ಗೆ, ಎಡ್ತಿಲ್ಲ ಮಣ್ಣಗುಂಡಿ ಬಳಿಯ ತಮ್ಮ ತೋಟಕ್ಕೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುವ ವೇಳೆ ಆಕಸ್ಮಿಕವಾಗಿ ಇವರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತರು, ತಾಯಿ, ಪತ್ನಿ ಹಾಗೂ ಮಗನನ್ನು ಅಗಲಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *