ಪುತ್ತೂರು: ಮಂಗಳೂರಿನಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ಯುವತಿಯ ಪಕ್ಕದಲ್ಲಿ ಕುಳಿತ ಅಪರಿಚಿತ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಜುಲೈ 22ರಂದು ನಡೆದಿದೆ.

ವ್ಯಕ್ತಿಯನ್ನು ಮಂಗಳೂರಿನ ಮಹಮ್ಮದ್ ತೌಹೀದ್ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಪುತ್ತೂರು ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಯುವತಿ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಯುವತಿಯ ಪಕ್ಕದಲ್ಲಿ ಕುಳಿತ್ತಿದ್ದ ಅಪರಿಚಿತ ಅನುಚಿತವಾಗಿ ವರ್ತಿಸಿದ್ಧಾನೆ. ತಕ್ಷಣವೇ ಯುವತಿ ಆರೋಪಿಗೆ ಬೈದಿದ್ದಾರೆ. ಬಳಿಕ ಈ ಘಟನೆಯ ವಿಚಾರವನ್ನು ತಂದೆಗೆ ಕರೆ ಮಾಡಿ ತಿಳಿಸಿದ್ದು, ಬಸ್ ಪುತ್ತೂರು ನಿಲ್ದಾಣಕ್ಕೆ ಬಂದಾಗ ಆತ ಬಸ್ಸಿನ ತುರ್ತು ನಿರ್ಗಮನ ಕಿಟಕಿಯ ಮೂಲಕ ಹೊರಗೆ ಹಾರಲು ಯತ್ನಿಸಿದಾಗ, ಯುವತಿಯ ತಂದೆ ಹಾಗೂ ಸಾರ್ವಜನಿಕರು ಆತನನ್ನು ಹಿಡಿದಿದ್ದಾರೆ. ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ದೂರುದಾರರು ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ: 56/2025 ಕಲಂ: 75 BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.




